ಉಡುಪಿ, ಸೆ.9(DaijiworldNews/AK):ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024" ಪ್ರಶಸ್ತಿಯನ್ನು ಸೆ.16ರಂದು ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಪ್ರದಾನ ಮಾಡಲಾಗುವುದು.

ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಸಹಯೋಗದಲ್ಲಿ ಕನ್ನಡ ನಾಡು-ನುಡಿ-ಸಂಸ್ಕೃತಿ, ಸಮಾಜಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಗುರುತಿಸಿ, 'ಸಂಗೊಳ್ಳಿ ರಾಯಣ್ಣ' ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ.
2024ರ ಸೆ.16ರಂದು ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ. ಗಣ್ಯರಾದ ಜಯಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕ ನೀಡಿ ಗೌರವಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್, ಕನ್ನಡ ಪರ ಸಂಘಟನೆಯ ಪ್ರಭಾಕರ ಪೂಜಾರ್ ಉಪಸ್ಥಿತರಿದ್ದರು.