ಬಂಟ್ವಾಳ, ಮೇ 27(Daijiworld News/SM): ಯೂತ್ ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಹಾಗೂ ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಮಂಜೆ ಗ್ರಾಮದ ನಿಶಾಂತ್(23), ಸಚಿನ್(25) ಹಾಗೂ ಕಾರ್ತಿಕ್(30) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆಸಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ನಲ್ಲಿ ಮೇ 23ರಂದು ರಾತ್ರಿ ಬಿಜೆಪಿ ಬಡಕಬೈಲ್ ಸಮಿತಿಯು ವಿಜಯೋತ್ಸವ ಹಮ್ಮಿಕೊಂಡಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಿಥುನ್ ರೈ ಅವರಿಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಿದ್ದರು.