ಕುಂದಾಪುರ, ಸೆ.15(DaijiworldNews/AA): ಅಂಬೇಡ್ಕರ್ ಅವರು ಸಂವಿಧಾನದ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿದು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ನಮ್ಮೆಲ್ಲರಿಗೆ ಕೊಟ್ಟು ಹೋಗಿದ್ದಾರೆ ಎಂದು ಮಾಜಿ ಸಂಸದ ಮಾಜಿ ಸಚಿವ ಕೆ ಜಯಪ್ರಕಾಶ್ ಹೆಗ್ಡೆ ಹೇಳಿದರು.




























ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೆಳಿಗ್ಗೆ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಮಾನವ ಸರಪಳಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕುಂದಾಪುರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸರ್ವಧರ್ಮಗಳು ಜಾತಿ ಮತ ಪಂಥಗಳನ್ನು ಸಾಮರಸ್ಯದಿಂದ ಕೊಂಡೊಯ್ಯುತ್ತಿರುವ ಭಾರತ ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಇನ್ನೂ ಗಟ್ಟಿಯಾಗಬೇಕು ಎಂದರು.
ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಬಿಸಿಎಂ ಹಾಸ್ಟೆಲಿನ ವಿದ್ಯಾರ್ಥಿನಿಯರು ಸಮೂಹ ನೃತ್ಯದ ಮೂಲಕ ರಂಜಿಸಿದರು. ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, ಪುರಸಭೆ ಮುಖ್ಯ ಅಧಿಕಾರಿ ಆನಂದಪ್ಪ ಪುರಸಭೆಯ ಅಧ್ಯಕ್ಷ ಮೋಹನ ದಾಸ ಶೆಣೈ ಹಾಗೂ ಹಿರಿಯರು ಭಾಗವಹಿಸಿದ್ದರು.
ಬಳಿಕ ಅರಣ್ಯ ಇಲಾಖೆಯ ವತಿಯಿಂದ ಹೆದ್ದಾರಿ ಬದಿಯಲ್ಲಿ ಅಮೂಲ್ಯ ಗಿಡಗಳನ್ನು ನೆಡಲಾಯಿತು. ಬಳಿಕ ವಿವಿಧ ಶಾಲಾ ಮಕ್ಕಳಿಂದ ಮತ್ತು ಸಾರ್ವಜನಿಕರಿಂದ ಹೆದ್ದಾರಿಯ ಪಕ್ಕದಲ್ಲಿ ಉದ್ದಕ್ಕೂ ಮಾನವ ಸರಪಳಿಯನ್ನು ನಿರ್ಮಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ಸೂಚಿಸಲಾಯಿತು. ಮಾನವ ಸರಪಳಿ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ ವೇ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪುರಸಭೆ ವತಿಯಿಂದ ಸಿಹಿ ತಿಂಡಿ ಹಂಚಲಾಯಿತು.