ಕಾಸರಗೋಡು ನ 28 : ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸೂರ್ಲು ವಿನಲ್ಲಿ ನಡೆದಿದೆ. ಚಿನ್ಮಯ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ನಿವೇದಿತಾ ( 14) ಮೃತ ಬಾಲಕಿ. ನ 27ರ ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ ಬಂದಿದ್ದ ನಿವೇದಿತಾ ಬಳಿಕ ಮನೆಯ ಕೋಣೆಯೊಳಗೆ ತೆರಳಿದ್ದು , ಸ್ವಲ್ಪ ಸಮಯದ ಬಳಿಕ ತಾಯಿ ಬಾಗಿಲು ತೆರೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣ ಸ್ಥಳೀಯರ ನೆರವಿನಿಂದ ಕಾಸರಗೋಡು ಆಸ್ಪತ್ರೆಗೆ ಸಾಗಿಸಿದರೂ ಆದಾಗಲೇ ಬಾಲಕಿ ಮೃತಪಟ್ಟಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಯಾಗದಿದ್ದರೂ ಇತ್ತೀಚಿಗೆ ನಡೆದ ಶಾಲಾ ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದು ಇದರಿಂದ ಈಕೆ ಮಾನಸಿಕವಾಗಿ ಕುಗ್ಗಿದ್ದಳು ಎನ್ನಲಾಗಿದೆ. ಘಟನೆ ಬಗ್ಗೆ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.