ಉಡುಪಿ, ಮೇ28(Daijiworld News/SS): ಇನ್ನೂ 10 ವರ್ಷ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಯಲ್ಲಿಯೇ ಸೇವೆ ಮಾಡಲಿ ಎಂದು ಉಡುಪಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಸ್ವಾಮೀಜಿ ಹೇಳಿದರು.
ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ನನ್ನ ವಿರೋಧ ಇಲ್ಲ. ಆದರೆ, ಇನ್ನೂ 10 ವರ್ಷ ಅಣ್ಣಾಮಲೈ ಅವರು ಪೊಲೀಸ್ ಇಲಾಖೆಯಲ್ಲಿಯೇ ಸೇವೆ ಮಾಡಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಕ್ಷೇತ್ರ ಶುದ್ಧಿ ಮಾಡಲು ಅಣ್ಣಾಮಲೈ ಸಮರ್ಥರು. ಆದರೆ ಪೊಲೀಸ್ ಇಲಾಖೆ ಬಿಡಬಾರದೆಂಬುದು ನಮ್ಮ ಆಸೆ ರಾಜಕೀಯಕ್ಕೆ ವಯಸ್ಸಿನ ಮಿತಿ ಇಲ್ಲ. 10 ವರ್ಷ ತಡವಾಗಿ ರಾಜಕೀಯಕ್ಕೆ ಸೇರಿ. ರಾಜಕೀಯ ಸೇರ್ಪಡೆಗೆ ನಿರ್ಧರಿಸಿದ್ದರೆ ಅದಕ್ಕೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿಯಾಗಿ ಸೋಲು ಕಾಣದ ವ್ಯಕ್ತಿ ಅಣ್ಣಾಮಲೈ. ಅಣ್ಣಾಮಲೈ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವ ತಜ್ಞರಾಗಿದ್ದಾರೆ. ಆದರೆ ರಾಜಕೀಯದಲ್ಲಿ ಸೋಲು-ಗೆಲುವಿಗೆ ಸಿದ್ಧವಾಗಿರಬೇಕು. ರಾಜಕೀಯದಲ್ಲಿ ಎಲ್ಲರ ಪ್ರೀತಿ ಗಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.