ಬೆಳ್ತಂಗಡಿ,ಮೇ29(Daijiworld News/AZM): ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ ಶಿಕ್ಷಕ ವಿಕ್ರಂ ಜೈನ್
ಆರೋಪಿ ಡೀಕಯ್ಯ
ಆರೋಪಿ ನಾಗೇಶ್
ಬಂಧಿತ ಆರೋಪಿಗಳನ್ನು ನಾಗೇಶ್ ಮತ್ತು ಡೀಕಯ್ಯ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಲೆ ನಡೆಸಿದ ಬಳಿಕ ಮಂಗಳೂರಿಗೆ ಬಂದು ಮಂಗಳೂರಿನಿಂದ ಮುಂಬೈಗೆ ಪರಾರಿಯಾಗಲು ಯೋಜನೆ ರೂಪಿಸಿದ್ದರು. ಆದ್ರೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಮತ್ತು ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಸರಕಾರಿ ಐಟಿಐ ಉಪನ್ಯಾಸಕ ವಿಕ್ರಂ ಜೈನ್ ಎಂಬವರನ್ನು ಮೇ 27 ರ ಸೋಮವಾರ ತಡರಾತ್ರಿ ಮುಂಡೂರು ಎಂಬಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.