ಉಡುಪಿ, ಸೆ.23(DaijiworldNews/AK): ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಸೆ.23ರಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅದೃಷ್ಟವಶಾತ್, ಆಸ್ಪತ್ರೆಯಲ್ಲಿ ಯಾವುದೇ ರೋಗಿಗಳು ಇರಲಿಲ್ಲ, ಏಕೆಂದರೆ ಅದು ನವೀಕರಣ ಹಂತದಲ್ಲಿದೆ.
ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಅಡುಗೆ ಮನೆಯಲ್ಲಿ ಕೆಲಸ ಶುರುಮಾಡುತ್ತಿದ್ದಾಗ ಹಾಲ್ ನಿಂದ ಸದ್ದು ಕೇಳಿಸಿತು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ.
ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು ಸುರಕ್ಷಿತವಾಗಿ ತೆರವು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.