ಬಂಟ್ವಾಳ, ಸೆ.23(DaijiworldNews/AA): ಚಾಲಕನ ನಿಯಂತ್ರಣ ತಪ್ಪಿ ಮಂಗಳೂರು-ಧರ್ಮಸ್ಥಳ ಮಧ್ಯೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕೊಪ್ಪಳದಲ್ಲಿ ಸಂಭವಿಸಿದೆ.
ಅವಘಡದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನು ಬಸ್ಸಿನಿಂದ ಪ್ರಯಾಣಿಕರನ್ನು ಹೊರಗೆ ತೆಗೆಯಲು ಸ್ಥಳೀಯ ಯುವಕರು ಸಹಕರಿಸಿದ್ದಾರೆ.
ಮಂಗಳೂರು ವಿಭಾಗಕ್ಕೆ ಸೇರಿದ ಬಸ್ಸು ತಾಂತ್ರಿಕ ದೋಷದಿಂದ ಪಲ್ಟಿಯಾಗಿದೆ ಎನ್ನಲಾಗಿದ್ದು, ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.