ಕುಂದಾಪುರ, ಸೆ.25(DaijiworldNews/AK):ಬೈಂದೂರು ವಲಯ ನಾಡದೋಣಿ ಮತ್ತು ಗಂಗೊಳ್ಳಿ ನಾಡ ದೋಣಿ ಮೀನುಗಾರರು ಒಂದುಗೂಡಿ ಸುಮಾರು ನೂರಕ್ಕೂ ಹೆಚ್ಚು ದೋಣಿಯವರು ಬುಲ್ಟ್ರೋಲ್ ಮಾಡುತ್ತಿರುವ ಬೋಟಗಳನ್ನು ತಡೆದು ನಿಲ್ಲಿಸಿ ತಮ್ಮ ಅಕ್ರೋಶವನ್ನು ಹೊರಗೆ ಹಾಕಿದ್ದಾರೆ, ಸಮುದ್ರದ ತೀರಪ್ರದೇಶದಲ್ಲಿ ಬುಲ್ ಟ್ರಾಲ್ ಮಾಡುವುದರಿಂದ ಮೀನುಗಳ ಸಂತತಿ ನಾಶವಾಗುವುದರಲ್ಲಿ ಸಂಶಯವಿಲ್ಲ. ಬುಲ್ಟ್ರಾಲ್ ಲೈಟ್ ಫಿಶಿಂಗ್ನಿಂದ ನಾಡದೋಣಿ ಮೀನುಗಾರರ ಜೀವನಕ್ಕೆ ತೊಂದರೆಯಾಗಿದೆ. ಜೀವದ ಹಂಗು ತೊರೆದು ಮೀನುಗಾರಿಕೆಗೆ ತೆರಳಿದರೆ ಬರಿಗೈಯಲ್ಲಿ ಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ಬಾಹಿರವಾಗಿ ಮೀನುಗಾರಿಕೆಗೆ ಮಾಡುತ್ತಿರುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೈಂದೂರು ವಲಯ ನಾಡದೋಣಿ ಮೀನುಗಾರರ ಅಧ್ಯಕ್ಷರಾದ ನಾಗೇಶ್ ಖಾರ್ವಿ ಆಗ್ರಹಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತಾಡಿದ ಅವರು, ಮಂಗಳೂರಿನಿಂದ ಕಾರವಾರದ ತನಕ ನಾಡ ದೋಣಿ ಮೀನುಗಾರರು ಸಭೆ ನಡೆಸಿ ಬುಲ್ಟ್ರೋಲ್ ಮೀನುಗಾರಿಕೆ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಟ್ರಾಲ್ ಬೋಟ್ ನವರು ಸುಮಾರು 45 ಪೊಸಿಷನ್ 29 ಲಾಂಗ್ನಲ್ಲಿ ಬುಲ್ಟ್ರೋಲ್ ಮಾಡುತ್ತಿರುವ ದೃಶ್ಯಗಳು ಕಂಡು ಬಂದ್ದಿದ್ದು, ನಾಡದೋಣಿಯುವರು ಇದನ್ನು ಪ್ರತಿಭಟಿಸಿದ್ದಾರೆ ಮತ್ತು,ಅಧಿಕಾರಿಗಳ ಗಮನಕ್ಕೆ ತಂದರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇರುವುದು ನಾಡ ದೋಣಿಯ ಮೀನುಗಾರರಿಗೆ ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಅವರು ಆರೋಪಿಸಿದ್ದಾರೆ.
ಪರಿಸ್ಥಿತಿ ಹೀಗೆ ಮುಂದುವರೆದರೆ ನಾಡ ದೋಣಿ ಮೀನುಗಾರರ ಕುಟುಂಬ ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುವುದರಲ್ಲಿ ಸಂಶಯವಿಲ್ಲ. ಇದೊಂದು ಅವೈಜ್ಞಾನಿಕ ಮೀನುಗಾರಿಕೆಯಾಗಿದ್ದು, ಲೈಟ್ ಫಿಶಿಂಗ್, ಬುಲ್ ಟ್ರಾಲ್ಗೆ ಭಾರತದಲ್ಲಿ ನಿಷೇಧವಿದೆ. ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರಕಾರದ ಆದೇಶದ ಪ್ರಕಾರ ಈ ರೀತಿ ಫಿಶಿಂಗ್ ಮಾಡುವಂತಿಲ್ಲ. ಅದರ ಹೊರತಾಗಿಯೂ ಅಲ್ಲಲ್ಲಿ ಕದ್ದು ಮುಚ್ಚಿ ಮೀನುಗಾರಿಕೆ ಮಾಡುತ್ತಿದ್ದಾರೆ. ಕಾನೂನು ಬಾಹಿರವಾಗಿ ಮೀನುಗಾರಿಕೆ ಮಾಡುವವರ ವಿರುದ್ಧ ಲೈಸೆನ್ಸ್ ರದ್ಧತಿ, ದಂಡ ವಿಧಿಸುವುದರ ಮುಖಾಂತರ ಕಠಿಣ ಕ್ರಮ ಸಂಬಂಧಪಟ್ಟ ಇಲಾಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಈ ರೀತಿ ಕಾನೂನುಬಾಹಿರ ಮೀನುಗಾರಿಕೆ ಚಟುವಟಿಕೆ ಮುಂದುವರೆದರೆ ಬುಲ್ಟ್ರೋಲ್ ನವರಿಗೂ ಮತ್ತು ನಾಡ ದೋಣಿ ಮೀನುಗಾರರು ಸಂಘರ್ಷಕ್ಕೆ ಕಾರಣವಾಗುತ್ತದೆ. ಮುಂದಿನ ದಿನಗಳಲ್ಲಿ ನಾಡ ದೋಣಿ ಮೀನುಗಾರಿಗೂ ಮತ್ತು ಬುಲ್ಟ್ರಾಲ್ ಬೋಟ್ ನವರಿಗೂ ಘರ್ಷಣೆ ಉಂಟಾಗುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಸಚಿವರು ಮತ್ತು ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಭೇಕು ಎಂದು ಆಗ್ರಹಿಸಿದ್ದಾರೆ. ಇಲ್ಲದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮೀನುಗಾರರು ಸೇರಿ
ಹೋರಾಟ ಮಾಡಲು ಮೂರು ಜಿಲ್ಲೆಯ ನಾಡ ದೋಣಿ ಮೀನುಗಾರರ ಮುಖಂಡರು ತೀರ್ಮಾನಿಸಿದ್ದಾರೆ ಎಂದರು.
ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಖಾರ್ವಿ, ವೆಂಕಟರಮಣ ಖಾರ್ವಿ, ಕೋಡೇರಿ ವಲಯ ಅಧ್ಯಕ್ಷ ರಾದ ಡಿ ಚಂದ್ರ ಖಾರ್ವಿ, ಮಾಜಿ ಅಧ್ಯಕ್ಷರಾದ ಮದನ್ ಕುಮಾರ್, ರಾಜ್ಯ ಒಕ್ಕೂಟ ದ ಕಾರ್ಯದರ್ಶಿ ಯಶ್ವಂತ್ ಖಾರ್ವಿ, ಮಹಾ ಈಶ್ವರ್ ಸೇವಾ ಸಮಿತಿಯ ಅಧ್ಯಕ್ಷರಾದ ರಾಮ ಖಾರ್ವಿ, ರಾಣೆಬಲೆ ಒಕ್ಕೂಟದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಮತ್ತು ಎಲ್ಲಾ ವಲಯದ ದೋಣಿಯ ಸದಸ್ಯರು ಉಪಸ್ಥಿತರಿದ್ದರು.