ಮಂಗಳೂರು, ಜೂ 01 (Daijiworld News/SM): ದ.ಕ. ಜಿಲ್ಲೆಯಲ್ಲಿ ಮಳೆಯ ಸುರಿಯದೆ ನೀರಿನ ಹಾಹಾಕಾರ ಉಂಟಾಗಿದ್ದರೂ ಕೂಡ ಮಂಗಳೂರಲ್ಲಿರುವ ಸರಕಾರಿ ಶಾಲೆಗಳಿಗೆ ಯಾವುದೇ ಎಫೆಕ್ಟ್ ಆಗಿಲ್ಲ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನೀರಿನ ಕೊರತೆ ಕಂಡು ಮುನ್ನೆಚ್ಚರಿಕೆ ವಹಿಸಿದ್ದೇವೆ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಸಮಸ್ಯೆ ಕಂಡುಬಂದಿಲ್ಲ. ಈ ವರ್ಷ ಯಥಾಪ್ರಕಾರ ಶಾಲೆಗಳು ಆರಂಭಗೊಂಡಿವೆ ಎಂದರು.
ಇನ್ನು ಸರಕಾರಿ ಬಸ್ ಗಳಲ್ಲಿ ಪಾಸ್ ಕುರಿತಾದ ಗೊಂದಲ ಇದ್ದು, ಜೂನ್ 6ರ ತನಕ ವಿದ್ಯಾರ್ಥಿಗಳು ಹಳೆ ಪಾಸ್ ಗಳನ್ನು ಬಳಸಬಹುದು. ಜೂನ್ 6 ನಂತರ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು. ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದಿದ್ದಾರೆ.
ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.