ಮಂಗಳೂರು, ಅ.08(DaijiworldNews/AK):ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಪ್ರಕರಣದ ಪ್ರಮುಖ ಆರೋಪಿ (ಎ1) ಆಯೇಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಶೋಯೆಬ್ (ಎ5) ಮತ್ತು ಸಿರಾಜ್ ಸೇರಿದ್ದಾರೆ.ಅಲಿ ನಾಪತ್ತೆಯಾದ ನಂತರ ರೆಹಮತ್ ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿದೆ. ಆಕೆಯನ್ನು ಬಂಟ್ವಾಳದ ಕಲ್ಲಡ್ಕ ಬಳಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಎಂದು ಪರಿಗಣಿಸಲಾದ ಅಬ್ದುಲ್ ಸತ್ತಾರ್ (ಎ2) ನನ್ನು ಬಂಧಿಸಲು ಸಿಸಿಬಿ ಕಾರ್ಯಾಚರಣೆಯನ್ನು ಆರಂಭಿಸಿದೆ.