ಮಂಗಳೂರು, ಅ.16(DaijiworldNews/AA): ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ಸಂಭವಿಸಿದೆ.
ಮಾಡೂರು ನಿವಾಸಿ ನಾಗೇಶ್(51) ಮೃತರು.
ಮೃತರು ಖಾಸಗಿ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.