ಉಡುಪಿ, ಅ.17(DaijiworldNews/AA): ಮಲ್ಪೆಯ ಕೆಮ್ಮಣ್ಣು ಸಮೀಪದ ಪಡು ತೋನ್ಸೆಯ ಕುದೂರು ನೆಸ್ಟ್ನಲ್ಲಿ ಇಂದು ಅಪರಿಚಿತ ಶವವೊಂದು ಪತ್ತೆಯಾಗಿದೆ.
ಪ್ರಾಥಮಿಕ ಮಾಹಿತಿ ಮೇರೆಗೆ ಮೃತರನ್ನು ಬಾಲು ನಾಯ್ಕ ಎಂದು ಗುರುತಿಸಲಾಗಿದೆ.
ಅಲ್ವಿನ್, ಹರಿದಾಸ್, ನಿಖಿಲ್ ಮತ್ತು ಸತ್ಯ ಅವರು ಮೃತದೇಹವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗಳಾದ ವಿಶ್ವನಾಥ್ ಮತ್ತು ನಾಗರಾಜ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ.