ಉಡುಪಿ, ಅ.19(DaijiworldNews/AA): ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆಯಲ್ಲಿ ಹೇಳಿದೆ.