ಕಾಸರಗೋಡು,ಜೂ04(DaijiworldNews/AZM) : ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಕಾಸರಗೋಡಿನ ಕುಂಡಂಗುಳಿಯ ಮರುತ್ತಡ್ಕ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಂಡಂಗುಳಿಯ ಚರಣ್ ರಾಜ್(22) ಎಂದು ಗುರುತಿಸಲಾಗಿದೆ.
ಚರಣ್ ರಾಜ್, ಮರುತ್ತಡ್ಕ ಗ್ಯಾರೇಜ್ ನಲ್ಲಿ ಇಲೆಕ್ಟ್ರಾನಿಕ್ಸ್ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚರಣ್ ರಾಜ್ ನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಘಟನೆಯ ಕುರಿತಂತೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.