ಕಾಪು, ನ.04(DaijiworldNews/AA): ಬೈಕ್ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಸ್ ನಿಲ್ದಾಣದ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.
ಕಾಪು ಕೊಪ್ಪಲಂಗಡಿ ನಿವಾಸಿ, ಟೈಲರ್ ವೃತ್ತಿಯ ಹರೀಶ್ ಕುಮಾರ್ (45) ಮೃತ ದುರ್ದೈವಿ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ನ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅದಾಗಲೇ ಗಾಯಾಳು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟ್ಯಾಂಕರ್ ಚಾಲಕ ಉತ್ತರ ಕನ್ನಡ ಜಿಲ್ಲೆಯ ಗೆದಿಗೆಯಪ್ಪ ಕೋಟೆ ಎಂಬಾತನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.