ಕಾರ್ಕಳ,ನ.06(DaijiworldNews/TA):ಸಾಣೂರು ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದ 6028 ಪಂಚಾಯತ್ ಗಳ ಪೈಕಿ 09 ವಿಭಾಗಗಳಲ್ಲಿ ಸ್ಪರ್ಧೆಯು ನಡೆದಿದ್ದು, ಸಾಮಾಜಿಕ ಭದ್ರತಾ ವಿಭಾಗದಲ್ಲಿ ಸಾಣೂರು ಗ್ರಾಮ ಪಂಚಾಯತಿಯು ಮೊದಲನೇಯದಾಗಿ ಹೊರಹೊಮ್ಮಿದ್ದು, ರಾಷ್ಟ್ರೀಯ ಸ್ಪರ್ಧೆಗೆ ಕರ್ನಾಟಕದಿಂದ ಆಯ್ಕೆಯಾಗಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ. ಮುಂದೆ ಭಾರತದ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಂಚಾಯತ್ ಗಳ ಪೈಕಿ ಸ್ಫರ್ಧೆ ನಡೆಯಲಿದ್ದು, ಇದರಲ್ಲಿ ಆಯ್ಕೆಯಾದ ಪಂಚಾಯತಿಗೆ ರಾಷ್ಟ್ರೀಯ ಪ್ರಶಸ್ತಿಯ ಜೊತೆಗೆ ನಗದು ಪರಸ್ಕಾರ ಲಭಿಸಲಿದೆ.
ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ, ಗ್ರಾ.ಪಂ. ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರಿಗೆ, ವಿಶೇಷವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿರವರು, ಗ್ರಾಮ ಪಂಚಾಯಿತಿಯ ಎಲ್ಲಾ ಸಿಬ್ಬಂದಿಯವರು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಮತ್ತು ಎಲ್ಲಾ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿ ಮತ್ತು ಸಿಬ್ಬಂದಿಗಳು, ಅಂಗನವಾಡಿಯ ಎಲ್ಲಾ ಕಾರ್ಯಕರ್ತೆಯರು ಮತ್ತು ಸಿಬ್ಬಂದಿಗಳು, ಎಲ್ಲ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು, ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಲ್ಲ ಪದಾಧಿಕಾರಿಗಳು, ಸ್ವ ಸಹಾಯ ಸಂಘದವರು, ಧರ್ಮಸ್ಥಳ ಯೋಜನೆಯ ಶೌರ್ಯ ವಿಪತ್ತು ಘಟಕ, ಯುವಕ ಮಂಡಲ (ರಿ) ಸಾಣೂರು, ಬಾಲಾಂಜನೇಯ ಯುವಕ ಸಂಘ, ಸಾಣೂರು ಗ್ರಾಮದ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸದಸ್ಯರ ಸಹಕಾರ ನಿರಂತರವಾಗಿ ಸಿಕ್ಕಿದ್ದು ಎಲ್ಲರಿಗೂ ಗ್ರಾಮ ಪಂಚಾಯತ್ ವತಿಯಿಂದ ಧನ್ಯವಾದ ಸಲ್ಲಿಸಿದ್ದಾರೆ.