ಬಂಟ್ವಾಳ, ನ.07(DaijiworldNews/AA): ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಸರಗೋಡಿನಲ್ಲಿ ದಸ್ತಗಿರಿ ಮಾಡುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು ಪಾಣಾಜೆ ಗ್ರಾಮದ ಉಡ್ಡಂಗಳ ನಿವಾಸಿ ಮೊಹಮ್ಮದ್ ಶರೀಫ್(೪೪) ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ ನ್ಯಾಯಂಗ ಬಂಧನ ವಿಧಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂಧಿಸಿ 2004ರ ನವೆಂಬರ್ 7ರಂದು ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನ ಕಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡ್ಡಿದ್ದನು.
ಕರ್ನಾಟಕ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ವಿಳಾಸ, ಬದಲಾವಣೆ ಮಾಡಿಕೊಂಡು ಬಂಧನಕ್ಕೆ ಸಿಗದೇ ಪ್ರಸ್ತುತ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪುತ್ತಿಗೆ ಎಂಬಲ್ಲಿ ವಾಸವಾಗಿದ್ದನು.
ಮೊಹಮ್ಮದ್ ಶರೀಫ್ ಇತ್ತೀಚಿಗೆ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ದಸ್ತಗಿರಿ ಆಗಿ ಇತ್ತೀಚಿಗೆ ಜಾಮೀನಿನ ಮೇಲೆ ಬಿಡುಗಡೆ ಆಗಿರುತ್ತಾನೆ.
ಈ ಕಾರ್ಯಚರಣೆಯನ್ನು ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಶಿವಕುಮಾರ್ ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಯವರಾದ ಹರಿಶ್ಚಂದ್ರ ಮತ್ತು ಗಣೇಶ ಅವರು ಕಾರ್ಯಚರಣೆ ನಡೆಸಿದ್ದರು.