ಬಂಟ್ವಾಳ, ನ.07(DaijiworldNews/AK): ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.
ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.