ಮುಲ್ಕಿ, ನ.09(DaijiworldNews/AA): ಕೂಲಿ ಕಾರ್ಮಿಕನೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಟಿಎ ಬೋರ್ಡ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಸುಧಾಕರ (39) ಎಂದು ಗುರುತಿಸಲಾಗಿದೆ.
ಮೃತ ಸುಧಾಕರನ ತಾಯಿ ಕಳೆದ ತಿಂಗಳ ಹಿಂದೆ ಸಾವನ್ನಪ್ಪಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮೃತ ಸುಧಾಕರ ಅವರ ತಮ್ಮ ಪ್ರಕಾಶ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.