ಮಂಗಳೂರು, ಜೂ 05 (Daijiworld News/MSP): ನಗರದಲ್ಲಿ ವಿಶ್ವಕಪ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಓರ್ವನನ್ನು ನಗರ ಅಪರಾಧ ಪತ್ತೆ ದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜಪ್ಪಿನಮೊಗರು ನಿವಾಸಿ ಕೀರ್ತಿರಾಜ್ (24) ಬಂಧಿತ ಆರೋಪಿ. ಈತನಿಂದ ಆರೋಪಿ 7.0 ಲಕ್ಷ ರೂ. ಹಣ ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿ ಲೋಟಸ್ ಮತ್ತು ಆರೆಂಜ್ ಆ್ಯಪ್ ಬಳಸಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಐಪಿಎಲ್ ಮತ್ತು ವಿಶ್ವಕಪ್ ಕ್ರಿಕೆಟ್ ಸಂದರ್ಭ ನಗರದಲ್ಲಿ ದೊಡ್ಡ ಮಟ್ಟದಲ್ಲಿ ಬೆಟ್ಟಿಂಗ್ ಜಾಲವಿರುವ ಬಗ್ಗೆ ಮನಗಂಡ ಕಮಿಷನರ್ ಡಾ. ಸಂದೀಪ್ ಪಾಟೀಲ್ ಈ ಕೃತ್ಯದ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.