ಬೆಳ್ತಂಗಡಿ,ನ.27(DaijiworldNews/TA): ಡ್ಯಾಂ ಬಳಿ ಸ್ನಾನಕ್ಕೆ ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ನಡೆದಿದೆ.
ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20) , ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19) , ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಮೃತರು. ಇವರು ಇಂದು ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದಿದ್ದರು.
ಮಧ್ಯಾಹ್ನ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಸ್ನಾನ ಮಾಡಲು ಮೂವರು ಹೋಗಿದ್ದು ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆಯಲಾಗಿದ್ದು, ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಮೂವರು ಕೂಡ ಮಂಗಳೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.