ಸುಳ್ಯ,ಡಿ.05 (DaijiworldNews/TA): ನಿಮ್ಮೆಲ್ಲ ಬೇಡಿಕೆಗಳನ್ನು ನಾನು 20 ವರ್ಷದ ಹಿಂದೆಯೇ ಸರಕಾರಕ್ಕೆ ಸಲ್ಲಿಸಿದ್ದೇನೆ. ನಿಮ್ಮ ಬೇಡಿಕೆಗಳಲ್ಲೇ ಪರಿಹಾರಗಳು ಇದೆ. ಯಾವ ರೀತಿ ಕಾನೂನು ಚೌಕಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂಬುದನ್ನು ನಾವು ಅರಿಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಸುಳ್ಯ ತಾ.ಪಂ. ಸಭಾಂಗಣದಲ್ಲಿ ತಾಲೂಕು, ಗ್ರಾ.ಪಂ. ಸದಸ್ಯರ ಮಹಾ ಒಕ್ಕೂಟದ ವತಿಯಿಂದ ನಡೆದ ಪಂಚಾಯತ್ ರಾಜ್ ಸಮಾವೇಶ ಕಾರ್ಯಕ್ರಮದಲ್ಲಿ ವಿವಿಧ ಅಹವಾಲುಗಳನ್ನು ಆಲಿಸಿ ಬಳಿಕ ಮಾತನಾಡಿದರು.
ಗ್ರಾ.ಪಂ. ಸದಸ್ಯರ ಗೌರವ ಧನ ಹೆಚ್ಚು ಮಾಡಬೇಕೆಂದು ನಾನು ಸರಕಾರವನ್ನು ಒತ್ತಾಯಿಸುತ್ತೇನೆ, ಮುಂದಿನ 1-2 ವರ್ಷಗಳ ಬಳಿಕ ಈ ಬಗ್ಗೆ ಸರಕಾರ ಕ್ರಮ ವಹಿಸಬಹುದು ಎಂಬ ನಿರೀಕ್ಷೆ ನನ್ನದು ಎಂದರು.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಿಮ್ಮೆಲ್ಲ ಬೇಡಿಕೆಗಳನ್ನು ವಿಧಾನ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದರು. ಗ್ರಾ.ಪಂ. ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದೆ. ನಿಮ್ಮೆಲ್ಲ ಬೇಡಿಕೆಗಳನ್ನು ವಿಧಾನ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ, ಎಲ್ಲಾ ಬೇಡಿಕೆ ಈಡೇರಿಸಲು ಆಗದಿದ್ದರೂ ಅರ್ಧದಷ್ಟು ಬೇಡಿಕೆಗಳನ್ನು ಇಡೇರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ತಾಲೂಕು ಪಂಚಾಯತಿ ಇಒ ರಾಜಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.