ಉಡುಪಿ, ಡಿ.05 (DaijiworldNews/AK):ಕಡಿಯಾಳಿ ಬಳಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ನಾಗರಿಕರೊಬ್ಬರು ಗಂಭೀರ ಗಾಯಗೊಂಡಿದ್ದಾರೆ.






ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಡಿಯಾಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಡನ್ ಬ್ರೇಕ್ ಹಾಕಿದ್ದರಿಂದ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.
ಈ ವೇಳೆ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ದಾಟಲು ಕಾಯುತ್ತಿದ್ದ ಹಿರಿಯ ನಾಗರಿಕರಿಗೆ ಡಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದಾಗ ಹಿರಿಯ ನಾಗರಿಕರು ತಮ್ಮ ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟಲು ಹೊರಟಿದ್ದರು ಎಂದು ವರದಿಯಾಗಿದೆ.
ಉಡುಪಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.