ಬಂಟ್ವಾಳ, ಡಿ.05 (DaijiworldNews/AK):ಮಾಣಿ ಸಮೀಪದ ಕೊಡಾಜೆ ನಿವಾಸಿ ಶರೀಫ್ ಕೊಡಾಜೆ ಅವರ ಮನೆಗೆ ಇಂದು ಕೇಂದ್ರದ NIA ತನಿಖಾ ಸಂಸ್ಥೆಯ ಪೋಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ.ಅಧಿಕಾರಿಗಳು ಇಂದು ಜಿಲ್ಲೆಯ ಕೆಲವೊಂದು ಮನೆಗಳಿಗೆ ದಾಳಿ ನಡೆಸಿದ್ದು, ಇದರಲ್ಲಿ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆ ಶರೀಫ್ ಅವರ ಮನೆಯು ಒಂದಾಗಿದೆ.
ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ನೀಡಿದ ಆರೋಪ ಎದುರಿಸುವ ಶರೀಫ್ ತಲೆಮರೆಸಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಮನೆಗೆ ದಾಳಿ ನಡೆಸಿದ್ದಾರೆ. ಆದರೆ ಪೋಲೀಸರು ಎಷ್ಟು ಗಂಟೆಗಳ ಕಾಲ ಮನೆಯಲ್ಲಿದ್ದರು,ಯಾವ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ.ಸ್ಥಳೀಯ ಪೋಲಿಸ್ ಠಾಣೆಗೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದ್ದು ,ಹೆಚ್ಚಿನ ಯಾವುದೇ ವಿಚಾರಗಳು ಅವರಿಗೆ ತಿಳಿದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.