ಮಂಗಳೂರು,ಡಿ.07 (DaijiworldNews/TA): ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ.



ಇಲ್ಲಿನ ಅನ್ಸಾರ್ ಎಂಬವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಮನೆಮಂದಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಪಾಂಡೇಶ್ವರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.