ಕುಂದಾಪುರ, ಡಿ.07(DaijiworldNews/AA): ವ್ಯಕ್ತಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಾವರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರೈಲ್ವೆ ಮಾರ್ಗದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ (45) ಎಂದು ಗುರುತಿಸಲಾಗಿದೆ.
ಪ್ರಭಾಕರ ಶೆಟ್ಟಿ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.