ಮಂಗಳೂರು,ಡಿ.08(DaijiworldNews/TA): ನಿಟ್ಟೆ ಎಜ್ಯುಕೇಶನ್ ಟ್ರಸ್ಟ್ ನ ಡಾ. ಎನ್ಎಸ್ಎಎಮ್ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರಯುಕ್ತ ಬಹುಮಾನ ವಿತರಣಾ ಕಾರ್ಯಕ್ರಮ ನಂತೂರಿನ ಕ್ಯಾಂಪಸ್ ನಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್, ಕಲಾವಿದೆ ರೂಪಶ್ರೀ ವರ್ಕಾಡಿ ಕಾಲೇಜಿನ ಪ್ರಾಂಶುಪಾಲ ಡಾ.ನವೀನ್ ಶೆಟ್ಟಿ ಕೆ. ಮತ್ತಿತರ ಅತಿಥಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ವಿವಿಧ ವಿಭಾಗಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲೆ ಅನ್ನಪೂರ್ಣ ನಾಯಕ್, ಸಂಚಾಲಕಿ ಸುಪ್ರಿಯಾ, ಸ್ಟೂಡೆಂಟ್ ಕೌನ್ಸಿಲ್ ಪ್ರೆಸಿಡೆಂಟ್ ಅಮೃತಾ, ಕಾರ್ಯದರ್ಶಿ ಚಿಂತನ್ ಮತ್ತಿತರರು ಇದ್ದರು.