ಪುತ್ತೂರು, ಡಿ.12(DaijiworldNews/AA): ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದವರು ತೀವ್ರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಡಿಸೆಂಬರ್ 12ರಂದು ಸಂಭವಿಸಿದೆ.

ಉಡುಪಿ ನೋಂದಣಿಯ ಕಾರು ಅಪಘಾತಕ್ಕೀಡಾಗಿದದು, ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿರುತ್ತದೆ. ಗಾಯಾಳುಗಳನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.