ಮಂಗಳೂರು, ಡಿ. 14(DaijiworldNews/TA): ಮಹಾನಗರ ಪಾಲಿಕೆಯ ವಿವಿಧ ಯೋಜನೆಯ ಅಡಿಯಲ್ಲಿ ನೀಡಲಾಗುವ ಸೌಲಭ್ಯಗಳನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಅವರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಹಸ್ತಾಂತರಿಸಿದರು.

ಒಂಬತ್ತು ಮಂದಿಗೆ ಶಸ್ತ್ರಚಿಕಿತ್ಸೆಗೆ ನೆರವು, ಒಂದು ಪಕ್ಕಾ ಮನೆ ನಿರ್ಮಾಣ ಕಾಮಗಾರಿ, ಇಬ್ಬರಿಗೆ ತಾಳಿಭಾಗ್ಯ ಯೋಜನೆಯ ಸಹಾಯ, ಒಬ್ಬರಿಗೆ ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು ನೀಡಲಾಯಿತು.