ಕಾರ್ಕಳ, ಡಿ.15(DaijiworldNews/AA): ಆಟವಾಡುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ರಾಜ್ಯಮಟ್ಟದ ಕಬಡ್ಡಿ ಆಟಗಾರ, ಮುಟ್ಲುಪಾಡಿ, ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಮೃತಪಟ್ಟಿದ್ದಾರೆ.

ಪ್ರೀತಂ ಅವರು ಶುಕ್ರವಾರ ಮಂಡ್ಯಾದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಾರೆ. ಈ ವೇಳೆ ಆಟವಾಡುತ್ತಿರುವಾಗಲೇ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಪ್ರೀತಂ ಅವರು ಪ್ರತಿಭಾನ್ವಿತರಾಗಿದ್ದು, ಶಿಕ್ಷಣದಿಂದಿಗೆ ಕ್ರೀಡೆಯಲ್ಲಿಯೂ ಬಹಳ ಆಸಕ್ತಿ ಹೊಂದಿದ್ದರು. ಹಂತಹಂತವಾಗಿ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಗಳಿಸಿದ್ದರು. ಮೃತರು ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.