ಮಂಗಳೂರು, ಡಿ.16(DaijiworldNews/AA): ಚಲಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಸಿಟಿ ಸೆಂಟರ್ ಮಾಲ್ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.




ಕಾರು ಚಲಿಸುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಕಾರಿನಲ್ಲಿದ್ದ ಪ್ರಯಾಣಿಕರು ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಸ್ಥಳೀಯರು ಅಗ್ನಿಶಾಮಕಕ್ಕೆ ಕರೆ ಮಾಡಿದ್ದು ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.