ಮಂಗಳೂರು, ಡಿ.16(DaijiworldNews/AK): ಕದ್ರಿ ಪಾರ್ಕ್ನಲ್ಲಿ ಭಾನುವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.


ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆ ಸಹಯೋಗದೊಂದಿಗೆ ವೈನ್ ಮೇಳ ನಡೆಯಿತು.
ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ, ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸಲಾಯಿತು.
ಗ್ರಾಹಕರು ದ್ರಾಕ್ಷಾ ರಸದ(ವೈನ್ ) ರುಚಿಯನ್ನು ಸವಿದು ಇಷ್ಟವಾದ ಬ್ರಾೃಂಡ್ಗಳನ್ನು ಖರೀದಿ ಮಾಡಿ ಕೊಂಡೊಯ್ದರು.ಮೇಳದಲ್ಲಿ ಟ್ರಾೃಕ್ ಮ್ಯೂಸಿಕ್, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಕುಟುಂಬ ಸಮೇತರಾಗಿ ಬಂದು ಮೇಳವನ್ನು ಸಂಭ್ರಮಿಸಿದರು.