ಮಂಗಳೂರು, ಡಿ.19(DaijiworldNews/TA):ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬ್ರಿಡ್ಜ್ ಮ್ಯಾನ್ ಎಂದೆ ಖ್ಯಾತಿ ಪಡೆದಿರುವ ಗಿರೀಶ್ ಭಾರದ್ವಜ್ ರವರಿಗೆ ಬುಧವಾರ ದ.ಕ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಪ್ರೆಸ್ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗಿರೀಶ್ ಭಾರದ್ವಾಜ್ ಭಾರತದಾದ್ಯಂತ ಹಳ್ಳಿ ಹಳ್ಳಿಗಳಲ್ಲಿ 142 ಕ್ಕಿಂತ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿದ ಸಮಾಜಸೇವಕ. ಇದಕ್ಕಾಗಿ ಅವರಿಗೆ ಸೇತು ಬಂಧು ಮತ್ತು ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ ಎಂದು ಹೆಸರು ಬಂದಿದೆ.. ಅವರಿಗೆ 2017ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ ರೈ,ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,ರಾಮಕೃಷ್ಣ ಆರ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ,ಆರ್ ಸಿ ಭಟ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.