ಮಂಗಳೂರು,ಡಿ.21(DaijiworldNews/TA): ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳವು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕೊಡಾಜೆ ಮೊಹಮ್ಮದ್ ಷರೀಫ್ ಬಂಧಿತ ಆರೋಪಿ.

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲುಕ್ಔಟ್ ನೋಟಿಸ್ ಜಾರಿಯಾಗಿದ್ದ ಪ್ರಮುಖ ಆರೋಪಿ, ನಿಷೇಧಿತ ಪಿಎಫ್ಐ ಸಂಘಟನೆಯ ರಾಜ್ಯ ಕಾರ್ಯಕಾರಿಣಿ ಸದಸ್ಯನಾಗಿದ್ದ ಕೊಡಾಜೆ ಮೊಹಮ್ಮದ್ ಷರೀಫ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಲುಕ್ಔಟ್ ನೋಟಿಸ್ ಜಾರಿಯಾಗಿದ್ದ ಆರೋಪಿ ಬಹ್ರೇನ್ನಿಂದ ದೆಹಲಿಗೆ ಬರುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ನಲ್ಲಿ ಪಿಎಫ್ಐನ ಬಾಹ್ಯ ತಂಡದ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ. ಪಿಎಫ್ಐನ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿದ ಬಳಿಕ ಪ್ರವೀಣ್ ನೆಟ್ಟಾರು ಹತ್ಯೆಯ ಆದೇಶ ನೀಡುವ ಜವಾಬ್ದಾರಿಯನ್ನು ಮೊಹಮ್ಮದ್ ಷರೀಫ್ ವಹಿಸಿದ್ದನು ಎನ್ನಲಾಗಿದೆ.
ಮೊಹಮ್ಮದ್ ಸೂಚನೆಯ ಮೇರೆಗೆ ಆರೋಪಿ ಮುಸ್ತಫಾ ಪೈಚಾರ್ ಮತ್ತು ಆತನ ತಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆಗೈದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತ ಮೊಹಮ್ಮದ್ ಶರೀಫ್ ಕೂಡಾ PFI ಸದಸ್ಯನಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.