ಮಂಗಳೂರು, ಡಿ.21(DaijiworldNews/TA): ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜಂಗಲ್ ರಾಜ್ ನಿರ್ಮಾಣವಾಗಿದೆ. ಕಾಂಗ್ರೆಸ್ ಗೂಂಡಾಗಳಿಗೆ ಮಣೆ ಹಾಕುತ್ತಿದೆ ಎಂಬುದು ಬೆಳಗಾವಿ ಅಧಿವೇಶನದ ವೇಳೆ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಂವಿಧಾನದ ಘನತೆ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್ ದಿಲ್ಲಿ ಮತ್ತು ಕರ್ನಾಟಕದಲ್ಲಿ ಸಂವಿಧಾನದ ಕಗ್ಗೊಲೆ ಮಾಡಿದೆ. ಲೋಕಸಭೆಯಲ್ಲಿ ರಾಹುಲ್ ಗಾಂಧಿ ವರ್ತನೆ ಮತ್ತು ಸಂಸದರ ಮೇಲಿನ ಹಲ್ಲೆ ಖಂಡನೀಯ.
ರಾಹುಲ್ ವಿರುದ್ಧ ತತ್ಕ್ಷಣ ಕಠಿನ ಕ್ರಮ ಕೈಗೊಳ್ಳಬೇಕು. ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧವೂಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.