ಉಡುಪಿ, ಡಿ.25(DaijiworldNews/AA): ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಭಕ್ತಿ ಶ್ರದ್ಧೆ, ಸಂಭ್ರಮ, ಸಡಗರದಿಂದ ಆಚರಿಸಿದರು.




















ಜಿಲ್ಲೆಯ ವಿವಿಧ ಚರ್ಚ್ಗಳನ್ನು ವಿದ್ಯುತ್ ದೀವಗಳಿಂದ ಅಲಂಕರಿಸಲಾಗಿತ್ತು. ಚರ್ಚ್ ಆವರಣದಲ್ಲಿ ಮತ್ತು ಕ್ರೈಸ್ತ ಬಾಂಧವರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಯನ್ನು ನಿರ್ಮಿಸುವುದರೊಂದಿಗೆ ನಕ್ಷತ್ರಗಳನ್ನು ಜೋಡಿಸಲಾಗಿತ್ತು. ಚರ್ಚ್ಗಳಲ್ಲಿ ರಾತ್ರಿ ವೇಳೆ ಜರುಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲೆಯ ಬ್ರಹ್ಮಾವರದ ಸೇಂಟ್ ಮೇರಿಸ್ ಆರ್ಥೊಡಾಕ್ಸ್ ಸಿರಿಯನ್ ಕ್ಯಾಥೊಡ್ರಲ್, ಮುದರಂಗಡಿಯ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್, ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ಗಳಲ್ಲಿ ಅದ್ಧೂರಿಯಾಗಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.