ಕುಂದಾಪುರ, ಡಿ.26(DaijiworldNews/TA): ಪ್ರಥಮ ವರ್ಷದ ಎಂಬಿಎ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಒಂದು ವಾರದ ಓರಿಯಂಟೇಶನ್ ಮತ್ತು ಇಂಡಕ್ಷನ್ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ಮೂಡಲಕಟ್ಟೆಯ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯಿತು. ಎಂಬಿಎ ವಿಭಾಗದ ಮುಖ್ಯಸ್ಥೆ ಡಾ.ಸುಚಿತ್ರಾ ಪೂಜಾರಿ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಜನತಾ ಹೋಲ್ಡಿಂಗ್ಸ್ ನ ವ್ಯವಸ್ಥಾಪಕ ಪಾಲುದಾರ ಪ್ರಶಾಂತ್ ಕುಂದರ್ ಅವರು ವಿದ್ಯಾರ್ಥಿಗಳಿಗೆ ನಾಯಕತ್ವ, ಮತ್ತು ಹೊಸ ದೃಷ್ಟಿಕೋನಗಳು ಮತ್ತು ವ್ಯವಹಾರದ ಅಭಿವೃದ್ಧಿಯ ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದರು.
ಐಎಂಜೆ ಸಂಸ್ಥೆಗಳ ಬೋಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ ಉನ್ನತ ಶಿಕ್ಷಣದ ಉದ್ದೇಶವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಉದ್ಯೋಗ ಮತ್ತು ತರಬೇತಿ ವಿಭಾಗದ ಡೀನ್ ಪ್ರಾಧ್ಯಾಪಕಿ ಅಮೃತ ಮಾಲಾ ಅವರು ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ ಅಬ್ದುಲ್ ಕರೀಂ ಅಧ್ಯಕ್ಷೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಎಂಸಿಎ ವಿಭಾಗದ ಮುಖ್ಯಸ್ಥೆ ಡಾ.ನಂದಿನಿ ಉಪಸ್ಥಿತರಿದ್ದರು. ಎಂಬಿಎ ವಿದ್ಯಾರ್ಥಿನಿ ಸಹಾರಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ನೀಲ್ ಗ್ಲಾಡ್ವಿನ್ ವಂದಿಸಿದರು.