ಮಂಗಳೂರು, ಡಿ.27(DaijiworldNews/AA): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಡಿಸೆಂಬರ್ 28 ಮತ್ತು 29ರಂದು ತಣ್ಣೀರುಭಾವಿ ಬೀಚ್ನಲ್ಲಿ ಆಯೋಜಿಸಲಾಗಿದ್ದ ಬೀಚ್ ಉತ್ಸವವನ್ನು ದ.ಕ ಜಿಲ್ಲಾಡಳಿತ ಮುಂದೂಡಿ ಪ್ರಕಟಣೆ ಹೊರಡಿಸಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಇದೀಗ ಬೀಚ್ ಉತ್ಸವವನ್ನು ಮುಂದೂಡಲಾಗಿದ್ದು, ಪರಿಷ್ಕೃತ ದಿನಾಂಕಗಳನ್ನು ಜಿಲ್ಲಾಡಳಿತ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.