ಮಂಗಳೂರು,ಡಿ.27(DaijiworldNews/TA): ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಅಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕ್ಷೇತ್ರದಲ್ಲಿ ಬ್ರಹ್ಮಕಲಶ ಸಹಿತ ಶತಚಂಡಿಕಾಯಾಗದ ಪ್ರಯುಕ್ತ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಜೊತೆಗೆ ಸಂಸದರಾದ ಬೃಜೇಶ್ ಚೌಟ, ಶಾಸಕ ಹರೀಶ್ ಪೂಂಜ,ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಜಿಲ್ಲಾ ಬಿಜೆಪಿ ನಾಯಕರು ಜೊತೆಗಿದ್ದರು.