ಪಡುಬಿದ್ರಿ, ಡಿ.30(DaijiworldNews/AA): ಸಮುದ್ರಕ್ಕೆ ಇಳಿದಿದ್ದ ಮೂವರು ಯುವಕರ ಪೈಕಿ ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ ನಡೆದಿದೆ.

ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಮೂವರು ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಬ್ಬರು ಯುವಕರು ಕೊನೆಯುಸಿರೆಳೆದಿದ್ದಾರೆ. ಇನ್ನೊರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.