ಮಂಗಳೂರು, ಡಿ.31(DaijiworldNews/AA): ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ.

ಮಾರ್ಗಸೂಚಿಗಳು ಈ ಕೆಳಗಿನಂತಿವೆ:
*ಅತೀವೇಗ ಮತ್ತು ಅಜಾಗರೂಕತೆಯಿಂದ ವೀಲಿಂಗ್/ಡ್ರಾಗ್ ರೇಸ್ ಗಳಲ್ಲಿ ಭಾಗಿಯಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
*ಅಮಲು ಪದಾರ್ಥವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದು.
*ದ್ವಿಚಕ್ರ ವಾಹನಗಳಲ್ಲಿ ಎರಡಕ್ಕಿಂತ ಹೆಚ್ಚು ಜನರು ಸವಾರಿ ಮಾಡಬಾರದು.
*ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವ ಸವಾರ ಮತ್ತು ಸಹಸವಾರ ಕಡ್ಡಾಯವಾಗಿ ಹೆಲೈಟ್ ಧರಿಸಬೇಕು.
*ಸೀಟ್ ಬೆಲ್ಸ್ ಕಡ್ಡಾಯವಾಗಿ ಧರಿಸಬೇಕು.
*ಸಾರ್ವಜನಿಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ/ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಾರ್ಕ್ ಮಾಡುವುದು.
*ಮಂಗಳೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ರಸ್ತೆಗಳಲ್ಲಿ ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ ತಪಾಸಣೆ ನಡೆಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
*ನಗರದ ಪ್ರಮುಖ ಜಂಕ್ಷನ್/ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಆಳವಡಿಸಲಾಗಿದ್ದು, ಕಮಾಂಡ್ & ಕಂಟ್ರೋಲ್ ಸೆಂಟರ್ ಮೂಲಕ ನಿಗವಹಿಸಲಾಗುವುದು.
*ಸಾರ್ವಜನಿಕರಿಗೆ ತೊಂದರೆಯಾಗುವಂತಹ/ಮೇಲಿನ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಮಾಹಿತಿ ನೀಡಲು ಕೋರಲಾಗಿದೆ.
ಮಂಗಳೂರು ನಗರದ ಎಲ್ಲಾ ನಾಗರೀಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರುತ್ತಾ ಶೂನ್ಯ ರಸ್ತೆ ಅಪಘಾತ ಹಾಗೂ ಸುರಕ್ಷಿತ ಹೊಸ ವರ್ಷವನ್ನು ಆಚರಿಸೋಣವೆಂದು ಆಶಿಸುತ್ತೇವೆ. ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.