ಮಂಗಳೂರು,ಡಿ.31 (DaijiworldNews/AK):ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್ ಗೆ ರೂ. 30ಸಾವಿರ, 2 ಕಿಲೋ ವ್ಯಾಟ್ ರೂ.60ಸಾವಿರ, 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್ಗಳಿಗೆ ರೂ. 78ಸಾವಿರ ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.
ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್ಅನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.