ಮಂಗಳೂರು,ಜ.01(DaijiworldNews/TA): ವಿಶ್ವಾದ್ಯಂತ ಸಡಗರ ಸಂಭ್ರಮದಿಂದ ಈಗಾಗಲೇ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಇನ್ನು ನೂತನ ವರ್ಷಾಚರಣೆ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಹಲವು ಕಡೆಗಳಲ್ಲಿ ನಿನ್ನೆ ತಡರಾತ್ರಿ ಪೊಲೀಸರಿಂದ ತಪಾಸಣೆ ಕಾರ್ಯ ನಡೆಯಿತು.

ಮಂಗಳೂರು ನಗರದ 19 ಕಡೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ನಡೆಸಲಾಗಿತ್ತು. ನೂತನ ವರ್ಷ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ನಿನ್ನೆ ರಾತ್ರಿ 10 ಗಂಟೆಗೆ ತಪಾಸಣೆ ಕಾರ್ಯ ಆರಂಭಿಸಿದ್ದರು.
ಅದರಲ್ಲೂ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಯಿತು. ಇನ್ನು ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ 805 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು.