ಮಂಗಳೂರು,ಜ.01(DaijiworldNews/TA): ಹೊಸ ವರ್ಷ ಹಿನ್ನೆಲೆಯಲ್ಲಿ ಹಲವೆಡೆ ಸಂಭ್ರಮಾಚರಣೆ ನಡೆಸಲಾಗಿದೆ. ಅದರಂತೆ ಮಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿ ವಾಹನ ಸವಾರರಿಗೆ ಕೇಕ್ ನೀಡುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಮಂಗಳೂರಿನ ಪ್ರಮುಖ ರಸ್ತೆಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಸಿಬ್ಬಂದಿ ಕೇಕ್ ಕತ್ತರಿಸಿ ನೂತನ ವರ್ಷವನ್ನು ಸ್ವಾಗತಿಸಿದ್ದು, ಬಳಿಕ ವಾಹನ ಸವಾರರಿಗೆ ಕೇಕ್ ನೀಡುವ ಮೂಲಕ ಸಂಭ್ರಮಾಚರಣೆ ನಡೆಸಿದರು.