ಮಂಗಳೂರು, ಜ.02 (DaijiworldNews/AK): ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ- ಬೆಂದೂರ್ವೆಲ್ ಪಣಂಬೂರು 1000 ಎಂ.ಎಂ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲ ಪಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಕಾರಣ ಜನವರಿ 3 ರಂದು ಬೆಳಿಗ್ಗೆ 6 ಗಂಟೆಯಿಂದ ಜನವರಿ 4 ರಂದು ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಬೆಂದೂರ್ವೆಲ್ ಲೋ ಲೇವೆಲ್ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರ್, ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗೂರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಭಾಗಶಃ ಕಾನ, ಬಾಳಾ, ಕುಳಾಯಿ, ಮುಕ್ಕ, ಪಣಂಬೂರು ಇತ್ಯಾದಿ ಪ್ರದೇಶಗಳಿಗೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಿರುವುದರಿಂದ ಸಾರ್ವಜನಿಕರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಗಳೂರು ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.