ಉಡುಪಿ, ಜ.0 (DaijiworldNews/AK): ವ್ಯಕ್ತಿಯೊಬ್ಬರು ತಮ್ಮ ನಿವಾಸದ ಹೊರಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕೊರಂಗ್ರಪಾಡಿಯಲ್ಲಿ ಜ.3ರಂದು ನಡೆದಿದೆ.

ಮೃತರನ್ನು ವಸಂತ ಕೋಟ್ಯಾನ್ (59) ಎಂದು ಗುರುತಿಸಲಾಗಿದೆ.ಒಂಟಿಯಾಗಿ ವಾಸಿಸುತ್ತಿದ್ದ ಇವರು ಅಡುಗೆ ವ್ಯಾಪಾರ ನಡೆಸುತ್ತಿದ್ದರು. ಮಾನಸಿಕ ವ್ಯಥೆಯಿಂದ ಜೀವನ ಅಂತ್ಯಗೊಳಿಸಿರುವ ಶಂಕೆ ವ್ಯಕ್ತವಾಗಿದೆ. ಮೃತರು ಬಿಟ್ಟು ಹೋಗಿದ್ದರು ಎನ್ನಲಾದ ನೋಟನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಪಿಎಸ್ಐ ಪುನೀತ್ಕುಮಾರ್, ತನಿಖಾ ಸಹಾಯಕಿ ನೇತ್ರಾವತಿ ಕಾನೂನು ಕ್ರಮಕೈಗೊಂಡಿದ್ದಾರೆ.ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ವೊಳಕಾಡು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲು ಸಹಕರಿಸಿದರು.
ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.