ಬಂಟ್ವಾಳ,ಜ.05(DaijiworldNews/TA): ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯ ಜಿಲ್ಲೆಯ ಇತರ ಸಂಘಗಳಿಗೆ ಮಾದರಿಯಾಗಿದೆ. ಅಶಕ್ತರಿಗೆ ನೆರವು, ವಿದ್ಯಾಪ್ರೋತ್ಸಾಹದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದು ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ನೂತನ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ ಹೇಳಿದರು.

ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ನೂತನ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ ಭೇಟಿ ಕಾರ್ಯಕ್ರಮ ಭಾನುವಾರ ನಡೆಯಿತು.ಇದರ ಅಂಗವಾಗಿ ಗಾಣದಪಡ್ಪುವಿನ ಆಟೋಲೈನ್ಸ್ ಗ್ಯಾರೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ದಿನಕರ ಕುಲಾಲ್ ಮಾತನಾಡಿದರು.
ದ.ಕ. ಗ್ಯಾರೇಜ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆಯಿಂದ ದೇವರು ಸಂತೃಪ್ತನಾಗುತ್ತಾನೆ. ಕೊಡವಂತಹ ನಿರ್ಮಲ ಮನಸ್ಸು ನಮಗೆ ಇರಬೇಕು , ಸ್ವಂತ ಭವನ ನಿರ್ಮೊಸುವ ಕನಸು ಅತೀ ಶೀಘ್ರದಲ್ಲಿ ನನಸಾಗಲಿ ಎಂದರು.
ಬಂಟ್ವಾಳ ವಲಯದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಮ್ಮ ದುಡಿಮೆಯ ಒಂದು ಭಾಗವನ್ನು ಅಶಕ್ತರಿಗೆ ನೀಡಿ ಅವರ ಕಣ್ಣೀರೊರೆಸುವ ಕಾರ್ಯವನ್ನು ಬಂಟ್ವಾಳ ವಲಯ ನಿರಂತರವಾಗಿ ಮಾಡಿಕೊಂಡು ಬಂದಿದೆ. ಪ್ರತಿಯೊಬ್ಬ ಸದಸ್ಯರು ವಲಯದೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಸಹಕಾರ ನೀಡಿದಾಗ ಸಂಘ ಅಭಿವೃದ್ಧಿಯಾಗಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು ನೀಡಲಾಯಿತು. ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಕೋಶಾಧಿಕಾರಿಯಾಗಿ ಆಯ್ಕೆಯಾದ ರಾಜ ಚೆಂಡ್ತಿಮಾರ್ ಅವರನ್ನು ಅಭಿನಂದಿಲಾಯಿತು. ನೂತನ ಸದಸ್ಯರನ್ನು ಸಂಘಕ್ಕೆ ಸೇರಿಸಿಕೊಳ್ಳಲಾಯಿತು. ಜಿಲ್ಲಾ ಕಾರ್ಯದರ್ಶಿ ರಾಜಗೋಪಾಲ್, ಕೋಶಾಧಿಕಾರಿ ಕಿರಣ್ ರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಜಾ ಚೆಂಡ್ತಿಮಾರ್ ಸ್ವಾಗತಿಸಿದರು. ಸುಧಾಕರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಜೇಶ್ ಕುಲಾಲ್ ಮಾಸಿಕ ವರದಿ ವಾಚಿಸಿದರು. ಭಾಸ್ಕರ ಕುಲಾಲ್ ಲೆಕ್ಕಪತ್ರ ಮಂಡಿಸಿದರು. ಸಿದ್ದೀಕ್ ವಂದಿಸಿದರು.