ಮಂಗಳೂರು, ಜ.06 (DaijiworldNews/AA): ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಅಂಗಡಿಗೆ ಗುದ್ದಿದ ಘಟನೆ ಮೂಡುಶೆಡ್ಡೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಸ್ಟೆಟ್ ಬ್ಯಾಂಕ್ ಮೂಡುಶೆಡ್ಡೆ ಸಂಚರಿಸುವ ಬಸ್ ಮೂಡುಶೆಡ್ಡೆ ಬಸ್ ನಿಲ್ದಾಣ ತಲುಪುತ್ತಿದ್ದಂತೆ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಬಸ್ ನಿಲ್ದಾಣದ ಬಳಿ ಇರುವ ಅಂಗಡಿ ಮುಂಭಾಗಕ್ಕೆ ಬಸ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬಸ್ ನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ.