ಮಂಗಳೂರು, ಜ.08 (DaijiworldNews/AA): ಪೆಟ್ರೋಲ್ ಬಂಕ್ನ ಸೂಪರ್ವೈಸರ್ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯು ಆರ್ ಕೋಡ್ ಅನ್ನು ಹಾಕಿ ಬಂಕ್ಗೆ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ದಾಖಲಾಗಿದೆ.

ಬಂಗ್ರಕೂಳೂರಿನ ರಿಲಯನ್ಸ್ ಔಟ್ಲೆಟ್ ಫ್ಯುಯೆಲ್ ಬಂಕ್ನಲ್ಲಿ ಸೂಪರ್ವೈಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಪಿ ಮೋಹನದಾಸ್, ಬಂಕ್ನ ಹಣಕಾಸು ವ್ಯವಹಾರ ನಿರ್ವಹಣೆಯ ಸಂಪೂರ್ಣ ಜವಬ್ದಾರಿ ನೋಡಿಕೊಂಡಿದ್ದ.
ಈತ 2023ರ ಮಾ. 1ರಿಂದ ಜು. 31ರ ವರೆಗೆ ಪೆಟ್ರೋಲ್ ಬಂಕ್ನಲ್ಲಿ ಬಂಕ್ನ ಕ್ಯುಆರ್ ಕೋಡ್ ತೆಗೆದು ತನ್ನ ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್ನ್ನು ಅಳವಡಿಸಿ ಗ್ರಾಹಕರಿಗೆ ಬಂಕ್ನದ್ದೇ ಕ್ಯುಆರ್ ಕೋಡ್ ಎಂದು ನಂಬಿಸಿ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್ಲೆಟ್ ಫ್ಯುಯೆಲ್ ಬಂಕ್ನ ಮ್ಯಾನೇಜರ್ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.